HomeKarnatakaವಿಕಲಚೇತನ ವಿದ್ಯಾರ್ಥಿಗಳಿಂದ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ವಿಕಲಚೇತನ ವಿದ್ಯಾರ್ಥಿಗಳಿಂದ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ ವಿದ್ಯಾರ್ಥಿಗಳ ವ್ಯಾಸಂಗವನ್ನು ಉತ್ತೇಜಿಸಲು 2024-25ನೇ ಸಾಲಿಗೆ ಎಸ್.ಎಸ್.ಪಿ ವಿದ್ಯಾರ್ಥಿವೇತನ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ವಿದ್ಯಾರ್ಥಿವೇತನ ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು, ನಗರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರನ್ನು, ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುರ್ನವಸತಿ ಕಾರ್ಯಕರ್ತರನ್ನು (ದಕ್ಷಿಣ ವಲಯದ ಮೊಬೈಲ್ ಸಂಖ್ಯೆ 8861328076, ಉತ್ತರ ವಲಯದ ಮೊಬೈಲ್ ಸಂಖ್ಯೆ : 7411520526, ಪೂರ್ವ ವಲಯ ಮೊಬೈಲ್ ಸಂಖ್ಯೆ : 9590676975, ಯಲಹಂಕ ತಾಲ್ಲೂಕಿನ ಮೊಬೈಲ್ ಸಂಖ್ಯೆ 9590676975, ಆನೇಕಲ್ ತಾಲ್ಲೂಕಿನ ಮೊಬೈಲ್ ಸಂಖ್ಯೆ : 8748903812) ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಸುಧಾರಣಾ ಸಂಸಂಸ್ಥೆಗಳ ಸಂಕೀರಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ-29 ಅಥವಾ ದೂರವಾಣಿ ಸಂಖ್ಯೆ : 080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular