ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ; ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರಾಜ್ಯ ಸರ್ಕಾರವು ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ/ನಿರ್ವಹಿಸುತ್ತಿರು ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ಇಲಾಖೆ ವೆಬ್ಸೈಟ್ www.dwdsc.kar.nic.in ರಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ. 25 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಿಎಸ್ಎನ್ಎಲ್ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಖುದ್ದಾಗಿ ಅಥವಾ ವೆಬ್ಸೈಟ್ ಅಥವಾ ದೂ.ಸಂ.: 08182-295234/251676 ಗಳನ್ನು ಸಂಪರ್ಕಿಸುವುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read