ರಾಜ್ಯಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ.

ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಜನವರಿ 31, 2024 ರೊಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ|| ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿಗೆ ಫೆ. 05 ರೊಳಗಾಗಿ ಸಲ್ಲಿಸುವುದು.

ಆಸಕ್ತರು ನಿಗದಿತ ನಮೂನೆ ಅರ್ಜಿ ಮತ್ತು ನಿಬಂಧನೆಗಳ ಮಾಹಿತಿಗಾಗಿ ಇಲಾಖಾ ಅಂತರ್ಜಾಲ www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ/ನಗರ ಕೇಂದ್ರ ಗ್ರಂಥಾಲಯಗಳ ಉಪನಿರ್ದೇಶಕರು/ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿಗಳಲ್ಲಿ ಪಡೆಯಬಹುದು ಎಂದು ಶಿವಮೊಗ್ಗ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-22864990/ 22867358 ಗಳನ್ನು ಸಂಪರ್ಕಿಸುವುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read