ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿಗೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ಕಲ್ಪಸಿಕೊಂಡು ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಗ್ರಾಮೀಣ ಮತ್ತು ನಗರ ಪ್ರದೇಶದ ನಿರುದ್ಯೋಗಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಥವಾ ಅದೇ ಕುಟುಂಬದ ಸದಸ್ಯರು ಪಿಎಂಆರ್ವೈ/ಆರ್ಇಜಿಪಿ/ಸಿಎಂಇಜಿಪಿ/ಇತರೆ ಯಾವುದೇ ಸರ್ಕಾರದ ಯೋಜನೆಯಡಿಯಲ್ಲಿ ಸಹಾಯಧನವನ್ನು /ಅಂಚಿನ ಹಣವನ್ನು ಪಡೆದಿರಬಾರದು.

ಆಸಕ್ತರು ಅರ್ಜಿಯನ್ನು ಆನ್ಲೈನ್ www.kviconline.gov.in/pmegpeportal ರಲ್ಲಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಶಿವಪ್ಪನಾಯಕ ಸಂಕೀರ್ಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ. ದೂ.ಸಂ.:08182-222802 ಮತ್ತು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ‘ಬಿ’ ಬ್ಲಾಕ್-7, 2ನೇ ಮಹಡಿ, ಉಪ ವಿಭಾಗಾಧಿಕಾರಿಗಳ ಕಚೇರಿ ಸಂಕೀರ್ಣ, ಬಾಲರಾಜ ಅರಸು ರಸ್ತೆ, ಶಿವಮೊಗ್ಗ. ದೂ.ಸಂ.: 08182-223273 ಗಳನ್ನು ಸಂಪರ್ಕಿಸುವಂತೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read