HomeKarnatakaJOB ALERT : ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

JOB ALERT : ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ದಾವಣಗೆರೆ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ 1 ಮೊರಾರ್ಜಿ ದೇಸಾಯಿ ಶಾಲೆ ಹಾಗೂ 3 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ ಮಾಧ್ಯಮದಲ್ಲಿ ಭೋಧಿಸಲು ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ನವಂಬರ್ 16 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇಲ್ಲಿಗೆ ಅರ್ಜಿಗಳನ್ನು ಸಲ್ಲಿಸಬಹುದು.

ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕನ್ನಡ ಶಿಕ್ಷಕರು, ವಿದ್ಯಾರ್ಹತೆ ಬಿ.ಎ, ಬಿ.ಇಡಿ, ಹುದ್ದೆ ಸಂಖ್ಯೆ-4, ದಾವಣಗೆರೆಯ ವಿನೋಬನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಇಂಗ್ಲೀಷ್ ಶಿಕ್ಷಕರು, ಸಮಾಜ ವಿಜ್ಞಾನ ಶಿಕ್ಷಕರು ವಿದ್ಯಾರ್ಹತೆ ಬಿ.ಎ, ಬಿ.ಇಡಿ, ಹುದ್ದೆ ಸಂ: 4, ಕೆ.ಟಿ.ಜೆ ನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಗಣಿತ ಶಿಕ್ಷಕರು, ಸಾಮಾನ್ಯ ವಿಜ್ಞಾನ ಶಿಕ್ಷಕರು ವಿದ್ಯಾರ್ಹತೆ ಬಿ.ಎಸ್ಸಿ, ಬಿ.ಇಡಿ ಹುದ್ದೆ ಸಂ: 4, ಚನ್ನಗಿರಿ ತಾಲ್ಲೂಕಿನ ನಲ್ಲೂರು ಗ್ರಾಮದ ಅಲ್ಪಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಗೆ ಉರ್ದು ಶಿಕ್ಷಕರು ವಿದ್ಯಾರ್ಹತೆ ಬಿ. ಎ, ಬಿ.ಇಡಿ, ಹುದ್ದೆ ಸಂ:4 ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-250022 ನ್ನು ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular