JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ : ಉಪ್ಪೂರು ಕೊಳಲಗಿರಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಹಾಗೂ ಡಿಪ್ಲೋಮಾ ಇನ್ ಮೆಕೆಟ್ರಾನಿಕ್ಸ್ ತರಗತಿಗಳನ್ನು ನಡೆಸಲು, ಎಂ.ಟೆಕ್, ಬಿ.ಇ ಹಾಗೂ ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಸರ್ಕಾರಿ ಪ್ರೌಢಶಾಲೆ ಹತ್ತಿರ, ಕೊಳಲಗಿರಿ, ಉಪ್ಪೂರು, ಉಡುಪಿ ದೂ.ಸಂಖ್ಯೆ: 0820-2950101, ಮೊ.ನಂ: 9880510585, ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ಹೊಸ ಅನ್ವೇ಼ಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ, ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ರೈತರು ಹಾಗೂ ರೈತ ಮಹಿಳೆಯರು ಜುಲೈ 24 ರ ಒಳಗೆ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಬಹುದಾಗಿದೆ.ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read