ಬಳ್ಳಾರಿ : ನಗರದ ಹಿರಿಯಾಳ್ ಕುಡಂ ಈದ್ಗಾ ರಸ್ತೆಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಆಂಗ್ಲ ಭಾಷಾ ಇಂಗ್ಲೀಷ್ ಮಾಧ್ಯಮ ಎನ್‌ಸಿಆರ್‌ಟಿ ಪಠ್ಯಕ್ರಮ ಬೋಧನೆ ಮಾಡಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಾಲೆಯಲ್ಲಿ 6 ರಿಂದ 10 ನೇ ತರಗತಿಯ ವರೆಗೆ ಒಟ್ಟು ದಾಖಲಾತಿ 557 ವಿದ್ಯಾರ್ಥಿಗಳಿದ್ದು, ಬಿ.ಎ ಬಿಇಡಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರ ಕಚೇರಿ ಅಥವಾ ಮೊ.7892989253 ಗೆ ಸಂಪರ್ಕಿಸಬಹುದಾಗಿದೆ ಎಂದು ಶಾಲೆಯ ಮುಖೋಪಾಧ್ಯಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2026-27 ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ಕಾನೂನು ಪದವೀಧರರಿಗೆ ಮಾಸಿಕ ಪ್ರೋತ್ಸಾಹಧನ ನೀಡುವ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಶಿಷ್ಯವೇತನ ಪಡೆಯಲು ಇಚ್ಛಿಸುವಂತಹ ಕಾನೂನು ಪದವಿಧರರು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಆಗಸ್ಟ್ 08 ರೊಳಗೆ ನಗರದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸಬಹುದಾಗಿದೆ.
*ಅರ್ಹತೆಗಳು:*
ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜ್ಯೆನ್, ಬೌದ್ಧ, ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ಮೀರಬಾರದು. ಅಭ್ಯರ್ಥಿಗಳ ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸರಬೇಕು. ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯನ್ನು ಪಾಸು ಮಾಡಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯ ವಯಸ್ಸು 30 ವರ್ಷ ಮೀರಿರಬಾರದು.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಅಥವಾ ದೂ.08392-200125, ಮೊ.8310321101 ಮತ್ತು ಸಿರುಗುಪ್ಪ- ಮೊ.9148889975, ಸಂಡೂರು- ಮೊ.9036925966 ಗೆ ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

