HomeLatest Newsಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗಗಳ 22 ವಸತಿ ಶಾಲೆಗಳಲ್ಲಿ  ಪ್ರಸಕ್ತ ಸಾಲಿಗೆ  6 ರಿಂದ 10ನೇ ತರಗತಿ(ವಸತಿ ಶಾಲೆ) ಹಾಗೂ ಪದವಿ ಪೂರ್ವ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

 ಹುದ್ದೆಗಳ ವಿವರ: 

ಕನ್ನಡ, ಇಂಗ್ಲೀಷ್, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ,  ಜೀವಶಾಸ್ತ್ರ ಉಪನ್ಯಾಸಕರ ತಲಾ 1 ಹುದ್ದೆಗಳಿಗೆ ಎಂ.ಎ, ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು. ಗಣಕವಿಜ್ಞಾನ ಉಪನ್ಯಾಸಕರ ಹುದ್ದೆಗೆ ಎಂಎಸ್ಸಿ ಕಂಪ್ಯೂಟರ್ ಸೈನ್ಸ್, ಎಂ.ಸಿ.ಎ, ಬಿ.ಇ & ಸಿ.ಎಸ್ &ಐ.ಎಸ್ ಮತ್ತು ಶಿಕ್ಷಕರ ಹುದೆಗಳಾದ ಕನ್ನಡ, ಆಂಗ್ಲ, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಶಿಕ್ಷಕರು ಸಂಬಂಧಿಸಿದ ವಿಷಯದಲ್ಲಿ ಪದವಿ ಮತ್ತು ಬಿ.ಇಡಿ(ಟಿ.ಇ.ಟಿ ಉತ್ತೀರ್ಣರಾದವರಿಗೆ ಮೊದಲ ಆದ್ಯತೆ), ಗಣಕ ವಿಜ್ಞಾನ ಶಿಕ್ಷಕರು ಪದವಿ ಬಿ.ಎಸ್ಸಿ, ಬಿಸಿಎ, ಬಿ.ಇ, ದೈಹಿಕ ಶಿಕ್ಷಣ ಶಿಕ್ಷಕರು ಬಿ.ಪಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 ಅರ್ಹರು ಅರ್ಜಿ ಹಾಗೂ ದೃಢೀಕರಿಸಿದ ದಾಖಲೆಗಳ ಪ್ರತಿಗಳನ್ನು ಜೂನ್ 18 ರ ಒಳಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಜಂಟಿ ನಿರ್ದೇಶಕ ನಾಗರಾಜ.ಕೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular