ಯುವ ಪರಿವರ್ತಕರು ಮತ್ತು ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ  : ಜನ ಆರೋಗ್ಯ ಕೇಂದ್ರ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಕಾರ್ಯ ನಿರ್ವಹಿಸಲು ಯುವ ಪರಿವರ್ತಕರು ಮತ್ತು ಯುವ ಸಮಾಲೋಚಕರ ಹುದ್ದೆಗೆ 21 ರಿಂದ 35 ವರ್ಷದೊಳಗಿನ ಪದವಿ ಹಾಗೂ ಮೇಲ್ಪಟ್ಟು (ಫಿಸಿಯೋಲಾಜಿ/ ಸೋಷಿಯಲ್ ವರ್ಕ್ ಪದವಿ ಹೊಂದಿದವರಿಗೆ ಆದ್ಯತೆ ನೀಡಲಾಗುವುದು) ಹಾಗೂ ಸಮುದಾಯದಲ್ಲಿ ಕೆಲಸ ಮಾಡಿರುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಇರಬೇಕು. ಯುವ ಪರಿವರ್ತಕರಿಗೆ ಗೌರವ ಧನವಾಗಿ ರೂ. 7000 ಹಾಗೂ ಯುವ ಸಮಾಲೋಚಕರಿಗೆ ಗೌರವ ಧನವಾಗಿ ರೂ. 9000 ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಇಲ್ಲಿ ಸಂಪರ್ಕಿಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read