ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 12 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಅರವಳಿಕೆ ತಜ್ಞರ 04 ಹುದ್ದೆಗಳು ಹಾಗೂ ಪ್ರಸೂತಿ ತಜ್ಞರ 03 ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರು ಮತ್ತು ತಜ್ಞ ವೈದ್ಯರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಅ.17ರಂದು ಬೆಳಗ್ಗೆ 11.00ರಿಂದ ಮ.1.00 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್.ರಸ್ತೆ, ಇಲ್ಲಿ ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳ ಒಂದು ಸೆಟ್ ನಕಲು ಮತ್ತು ಮೂಲ ಪ್ರತಿ ಹಾಗೂ ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222382 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.