ಉದ್ಯೋಗ ವಾರ್ತೆ : ‘DRDO’ ದಲ್ಲಿ 52 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ |DRDO Recruitment 2024

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ತನ್ನ ವ್ಯಾಪ್ತಿಯಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನಿಂದ ಗ್ರ್ಯಾಜುಯೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ಈ ಅಧಿಸೂಚನೆಯ ಮೂಲಕ ಒಟ್ಟು 54 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 12 ತಿಂಗಳ ಕಾಲ ಅಪ್ರೆಂಟಿಸ್ ತರಬೇತಿ ನೀಡಲಾಗುವುದು.ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು:

ಅಧಿಸೂಚನೆ ಹೊರಡಿಸುವ ಏಜೆನ್ಸಿ: ಡಿಆರ್ಡಿಒ ಅಡಿಯಲ್ಲಿ ಐಟಿಆರ್.

ಭರ್ತಿ ಮಾಡಬೇಕಾದ ಹುದ್ದೆಗಳು:
ಗ್ರಾಜುಯೇಟ್ ಅಪ್ರೆಂಟಿಸ್ – 30
ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ – 24

ಅರ್ಹತೆ: ಸಂಬಂಧಪಟ್ಟ ವಿಷಯಗಳಲ್ಲಿ ಡಿಪ್ಲೊಮಾ ಅಥವಾ ಬಿಟೆಕ್ ಪೂರ್ಣಗೊಳಿಸಿದ ಅಭ್ಯರ್ಥಿಗಳು (2020-2024 ರ ನಡುವೆ ಪೂರ್ಣಗೊಳಿಸಿದವರು) ಅರ್ಹರು.

ಸ್ಟೈಫಂಡ್:
ಗ್ರಾಜುಯೇಟ್ ಅಪ್ರೆಂಟಿಸ್ – ₹ 9,000/-
ಟೆಕ್ನಿಷಿಯನ್ ಅಪ್ರೆಂಟಿಸ್ – ₹ 8,000/-

ಅರ್ಜಿ ಸಲ್ಲಿಸುವುದು ಹೇಗೆ: ಅರ್ಜಿಯನ್ನು ಅಂಚೆ ಮೂಲಕ ಕಳುಹಿಸಬೇಕು.

ವಿಳಾಸ:
ನಿರ್ದೇಶಕರು, ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್),
ಚಂಡಿಪುರ, ಬಾಲಸೋರ್, ಒಡಿಶಾ – 756025.

ಆಯ್ಕೆ ಪ್ರಕ್ರಿಯೆ: ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಕೊನೆಯ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 02-09-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 07-10-2024

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿಗಳನ್ನು ಕಳುಹಿಸಬೇಕು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read