JOB ALERT : ಮಹಿಳಾ ಸಬಲೀಕರಣ ಘಟಕದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದಿಂದ ಮಿಷನ್ ಶಕ್ತಿ ಯೋಜನೆಯಡಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೊಡಗು ಜಿಲ್ಲೆ ಇವರ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿರುವ ಜಿಲ್ಲಾ ಮಹಿಳಾ ಸಬಲೀಕರಣ ಘಟಕಕ್ಕೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾ ಮಿಷನ್ ಸಂಯೋಜಕರು, ಪಿಎಂಎಂವಿವೈ ಜಿಲ್ಲಾ ಸಂಯೋಜಕರು, ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕ ತಜ್ಞರ ವಿದ್ಯಾರ್ಹತೆ ನಿಗದಿಪಡಿಸಿ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಮಿಷನ್ ಸಂಯೋಜಕರು ಮತ್ತು ಪಿಎಂಎಂವಿವೈ ಜಿಲ್ಲಾ ಸಂಯೋಜಕರ ಹುದ್ದೆಗೆ ಸಮಾಜ ವಿಜ್ಞಾನದಲ್ಲಿ ಪದವಿ, ಲೈಪ್ಸೈನ್ಸ್, ನ್ಯೂಟ್ರೀಷನ್, ಮೆಡಿಷಿನ್, ಹೆಲ್ತ್ ಮ್ಯಾನೇಜ್ಮೆಂಟ್, ಸಾಮಾಜಿಕ ಕೆಲಸ, ರೂರಲ್ ಮ್ಯಾನೇಜ್ಮೆಂಟ್, 3 ವರ್ಷಗಳ ಅನುಭವ ಹೊಂದಿರಬೇಕು.

ಹಣಕಾಸು ಸಾಕ್ಷರತೆ ಮತ್ತು ಲೆಕ್ಕ ಪರಿಶೋಧಕ ತಜ್ಞರ ಹುದ್ದೆಗೆ ಎಕಾನಾಮಿಕ್ ಪದವಿ, ಬ್ಯಾಂಕಿಂಗ್, ಮತ್ತಿತರ. ಪೋಸ್ಟ್ ಗ್ರ್ಯಾಜ್ಯುವೇಟ್ಸ್ ವಿದ್ಯಾರ್ಹತೆ ಹೊಂದಿರಬೇಕು. 3 ವರ್ಷಗಳ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು ಫೆಬ್ರವರಿ, 17 ಕೊನೆಯ ದಿನವಾಗಿದೆ. ಸಂದರ್ಶನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

ಪ್ರತ್ಯೇಕ ಹುದ್ದೆಗೆ ಪ್ರತ್ಯೇಕ ಅರ್ಜಿ ಸಲ್ಲಿಸುವುದು. ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ “ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್ ಹತ್ತಿರ ,ಮೈಸೂರು ರಸ್ತೆ ಮಡಿಕೇರಿ-571201” ಇವರಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು. ಅವಧಿ ಮೀರಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272 298379 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read