HomeKarnatakaನೇಕಾರರ ಸಮ್ಮಾನ್ ಯೋಜನೆ ಧನಸಹಾಯಕ್ಕೆ ಅರ್ಜಿ ಆಹ್ವಾನ

ನೇಕಾರರ ಸಮ್ಮಾನ್ ಯೋಜನೆ ಧನಸಹಾಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ :   ಕರ್ನಾಟಕ ಸರ್ಕಾರದ ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ. 5,000 ಗಳ ಆರ್ಥಿಕ ನೆರವು ನೀಡುವ “ನೇಕಾರರ ಸಮ್ಮಾನ್ ಯೋಜನೆ” ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಫಲಾನುಭವಿಗಳಿಗೆ ಈ ಯೋಜನೆಯ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

ಅರ್ಜಿದಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. 4ನೇ ರಾಷ್ಟ್ರೀಯ ಕೈಮಗ್ಗ ಗಣತಿ ಪಟ್ಟಿಯಲ್ಲಿ ನೋಂದಾಯಿತರಾಗಿ ‘ಪೆಹಚಾನ್ ಕಾರ್ಡ್’ ಹೊಂದಿರಬೇಕು ಹಾಗೂ ಪ್ರಸ್ತುತ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಿಎಂಎಸ್‌ಬಿವೈ ಯೋಜನೆ: ನೇಕಾರರು ಕಡ್ಡಾಯವಾಗಿ ಪಿಎಂಎಸ್‌ಬಿವೈ ಯೋಜನೆಯಡಿ ನೋಂದಾಯಿಸಿಕೊಂಡಿರಬೇಕು. ಅರ್ಹ ನೇಕಾರರು ನಿಗದಿತ ನಮೂನೆಯಲ್ಲಿ ತಮ್ಮ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ವಿವರಗಳೊಂದಿಗೆ ದಿನಾಂಕ: 30.06.2026 ರ ಒಳಗೆ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ,

ಜಿಲ್ಲಾ ಪಂಚಾಯತ್, ಮಂಜುನಾಥ್ ಟವರ್ಸ್, 2ನೇ ಮಹಡಿ, ಗಾಂಧಿ ನಗರ, 1ನೇ ಮುಖ್ಯ ರಸ್ತೆ, ಶಿವಮೊಗ್ಗ – 577201 ಅರ್ಜಿ ಸಲ್ಲಿಸಬೇಕು.ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ವಿವರಗಳನ್ನು ಸರ್ಕಾರದ ‘ಸೇವಾಸಿಂಧು’ ಪೋರ್ಟಲ್‌ನಲ್ಲಿ ಭರ್ತಿ ಮಾಡಿ ನೇರವಾಗಿ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ 08182-223405 ಅನ್ನು ಸಂಪರ್ಕಿಸಬಹುದು ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ/ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಜವಾಹರ್ ನವೋದಯ ವಿದ್ಯಾಲಯ: 11ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜವಾಹರ್ ನವೋದಯ ವಿದ್ಯಾಲಯದ ಕಾರ್ಯಾಲಯಕ್ಕೆ ಭೇಟಿ ನೀಡಿ, ಜೂನ್ 25 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು 2025-26ನೇ ಸಾಲಿನಲ್ಲಿ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. 10ನೇ ತರಗತಿಯ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇಕಡಾವಾರು 60ರಷ್ಟು ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಯು ದಿನಾಂಕ 01.06.2009 ರಿಂದ 31.07.2011 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

ಹೆಚ್ಚಿನ ಮಾಹಿತಿ ಹಾಗೂ ಸಂಪರ್ಕಕ್ಕಾಗಿ ವಿದ್ಯಾಲಯದ ಅಧಿಕೃತ ಇಮೇಲ್ ([email protected]) ಅಥವಾ ವೆಬ್‌ಸೈಟ್ (https://navodaya.gov.in/…/SHIMOGA/en/home/index.html) ಅನ್ನು ಗಮನಿಸಬಹುದಾಗಿದೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular