‘ಯುವನಿಧಿ’ ಯೋಜನೆ ನೋಂದಣಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

 ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ ಮೂಲಕ ಆನ್ಲೈನ್ ನೋಂದಣಿ ಆಹ್ವಾನಿಸಿದೆ.

2022-23ನೇ ಹಾಗೂ ನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವ ಅರ್ಹರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ. 3000/- (ಪದವೀಧರ ನಿರುದ್ಯೋಗಿಗಳು) ಹಾಗೂ ರೂ. 1500/- (ಡಿಪ್ಲೋಮಾ ಪಡೆದ ನಿರುದ್ಯೋಗಿಗಳು) ನೇರ ನಗದು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.

2022-23ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣಾರಾದವರು, ಪದವಿ/ಡಿಪ್ಲೊಮಾ ನಂತರ ಕನಿಷ್ಟ 6 ತಿಂಗಳ ಅವಧಿಯವರೆಗೆ ಸರ್ಕಾರಿ/ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವ್ಯಾಸಂಗ ಮುಂದುವರಿಸದೇ ಇರುವವರು, ಕರ್ನಾಟಕದಲ್ಲಿ ವಾಸವಿರುವವರು ಯುವನಿಧಿ ಯೋಜನೆಗೆ ನೊಂದಣಿ ಮಾಡಿಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, 2ನೇ ತಿರುವು, ಗುತ್ಯಪ್ಪ ಕಾಲೋನಿ ಶಿವಮೊಗ್ಗ. ದೂ.ಸಂ.:08182-255293 ಅಥವಾ ಸಹಾಯವಾಣಿ 18005999918 ನ್ನು ಸಂಪರ್ಕಿಸುವುದು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read