HomeKarnatakaಅರ್ಹ ಫಲಾನುಭವಿಗಳಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಅರ್ಹ ಫಲಾನುಭವಿಗಳಿಂದ ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : 2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ವಾಸವಾಗಿರುವ ಹಿಂದುಳಿದ ವರ್ಗಗಳ ವಸತಿ ರಹಿತ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ವಸತಿ ಸೌಲಭ್ಯ ಕಲ್ಪಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬಳ್ಳಾರಿ, ಸಿರುಗುಪ್ಪ ಮತ್ತು ಸಂಡೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಜುಲೈ 05 ರೊಳಗಾಗಿ ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಬಂಧನೆಗಳು
ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ಸಮುದಾಯದವರೆಂದು ಗುರುತಿಸಲ್ಪಟ್ಟಿರಬೇಕು. ಹಿಂದುಳಿದ ವರ್ಗಗಳ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಎಲ್ಲಾ ಜಾತಿಗಳಿಗೂ ಪ್ರಾತಿನಿಧ್ಯತೆಯನ್ನು ನೀಡಲಾಗುವುದು. ಅರ್ಜಿದಾರರು ಇತರೆ ಯಾವುದೇ ಯೋಜನೆ, ಇಲಾಖೆ, ನಿಗಮಗಳಿಂದ ವಸತಿ ಸೌಲಭ್ಯವನ್ನು ಪಡೆದಿರಬಾರದು. ವಸತಿ ರಹಿತರು ಸ್ವಂತ ನಿವೇಶನ ಹೊಂದಿರಬೇಕು ಹಾಗೂ ನಿವೇಶನವು ಕುಟುಂಬದವರ ಹೆಸರಿನಲ್ಲಿ ನೊಂದಣಿಯಾಗಿರಬೇಕು. ಕನಿಷ್ಠ 20 ವರ್ಷಗಳವರೆಗೆ ನಿವೇಶನವನ್ನು ಪರಬಾರೆ ಮಾಡುವಂತಿಲ್ಲ. ಕುಟುಂಬದ ಒಟ್ಟು ವಾರ್ಷಿಕ ವರಮಾನ ರೂ.02 ಲಕ್ಷಗಳ ಮಿತಿಯೊಳಗಿರಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜು ಅಸರು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ದೂ.08392-275751 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular