 ಕಲಬುರಗಿ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ೨೦೨೩-೨೪ನೇ ಸಾಲಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ನೇರ ಸಾಲ ಯೋಜನೆಯಡಿ ಕಲಬುರಗಿ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಈ ಯೋಜನೆಯಡಿ ಮತೀಯ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಜನಾಂಗಕ್ಕೆ ಸೇರಿದ ವಿದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಮತ್ತು ಭಾರತದ IIT’S IIM’S, ISC, ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪದವಿ/ಸ್ನಾತಕೋತ್ತರ ಕೋರ್ಸ್ಗಳಿಗೆ ವಿದ್ಯಾಭ್ಯಾಸ ಮಾಡಲು ಸಂಪೂರ್ಣ ಕೋರ್ಸ್ಗೆ ೨೦ ಲಕ್ಷ ರೂ. ಗಳವರೆಗೆ ಸಾಲ ನೀಡಲಾಗುತ್ತದೆ.
ಅಭ್ಯರ್ಥಿಗಳ ವಯೋಮಿತಿ ೩೮ ವರ್ಷ ಮೀರರಬಾರದು. ನಿಗಮಕ್ಕೆ ಆಸ್ತಿಯ (ಕಟ್ಟಡ/ಭೂಮಿ) ಅಡಮಾನ ಮೇಲೆ ಮಾತ್ರ ಸಾಲ ಒದಗಿಸಲಾಗುತ್ತದೆ. ಇಂತಹ ಕೋರ್ಸ್ಗಳಿಗೆ ಆಯ್ಕೆಯಾದ ಅರ್ಹ ಅಲ್ಪಸಂಖ್ಯಾ ವಿದ್ಯಾರ್ಥಿಗಳು http//kmdconline.karnataka.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ ಸಲ್ಲಿಸಬೇಕು. ಈಗಾಗಲೇ 2023 ರ ಜೂನ್ 13 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಅರ್ಜಿಯ ಜೊತೆಗೆ ಆನ್ಲೈನ್ನಲ್ಲಿ ನೊಂದಾಯಿಸಿರುವ ಎಲ್ಲಾ ದಾಖಲಾತಿಗಳನ್ನು ಲಗತ್ತಿಸಿ ಕಲಬುರಗಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಎಸ್.ಆರ್. ರೆಸಿಡೆನ್ಸಿ, ಪ್ಲಾಟ್ ನಂ: ೧೮೮೧, ಮೊದಲನೆ ಮಹಡಿ, ಡಾ|| ಎಲ್.ಎಸ್. ರಾಠಿ ಆಸ್ಪತ್ರೆ ಎದುರುಗಡೆ, ಹಳೆ ಜೇವರ್ಗಿ ರಸ್ತೆ, ಕಲಬುರಗಿ-585102 ವಿಳಾಸಕ್ಕೆ ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-232425ಗೆ ಸಂಪರ್ಕಿಸಲು ಕೋರಲಾಗಿದೆ.

		 Loading ...
 Loading ... 