ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಗಳಡಿ ಅರ್ಜಿ ಆಹ್ವಾನ; ಇಲ್ಲಿದೆ ಡಿಟೇಲ್ಸ್

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯ ಪಡೆಯಲು ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಲಾಗಿದೆ.‌

ಅರ್ಹತೆಗಳು: ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯುವವರು ಸವಿತಾ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇರಿಸಿದೆ.

ನಿಗಮದ ಯೋಜನೆಗಳ ವಿವರ: ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ).

ಅರ್ಜಿ ಸಲ್ಲಿಸಲು ನ.03 ಕೊನೆಯ ದಿನವಾಗಿದೆ (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ).

ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.kssd.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂ.080-22374832 ಹಾಗೂ ಮೊ.8050770004, 8050770005 ನಿಂದ ಪಡೆಯಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read