ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಗೆ ಉಚಿತ ಮೀನುಗಾರಿಕೆ ಸಲಕರಣೆಗಳ ಕಿಟ್ ವಿತರಿಸಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ವೆಬ್ ಸೈಟ್ https://ballari.nic.in ಅಥವಾ ಬಳ್ಳಾರಿ ತಾಲ್ಲೂಕಿನ ಮೀನುಗಾರಿಕೆ ಇಲಾಖೆಯ ಕಚೇರಿಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ನ.22 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
