ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯು ಯುವನಿಧಿ ಫಲಾನುಭವಿಗಳಿಗೆ ಸಿಎಂಕೆಕೆವೈ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಜಿಟಿಟಿಸಿ, ಕೆಜಿಟಿಟಿಐ, ಸಿಡಾಕ್, ಮೋಕ್ಷಗುಂಡ ಮತ್ತು ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಗಳ ಮುಖಾಂತರ ತರಬೇತಿ ನೀಡಲಾಗುತ್ತಿದ್ದು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್ಸೈಟ್ ಮೂಲಕ ನೊಂದಾಯಿಸಿಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.