ಶಿವಮೊಗ್ಗ : ಮಿಲಿಟರಿ ಪಿಂಚಣಿ ರಹಿತ ಕರ್ನಾಟಕದ ಮಾಜಿ ಸೈನಿಕರ ಹಾಗೂ ಕರ್ನಾಟಕದಲ್ಲಿ ನೆಲೆಸಿರುವ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಒಂದನೇ ತರಗತಿಯಿಂದ ಪಿ.ಯು.ಸಿ ಎರಡನೇ ವರ್ಷದವರೆಗೆ ಓದುವ ಮಕ್ಕಳಿಗೆ ಪುಸ್ತಕ ಅನುದಾನಕ್ಕಾಗಿ ಮತ್ತು ಡಿಗ್ರಿ / ಡಿಪ್ಲೋಮಾ ಜೆ.ಓ.ಸಿ / ಪ್ರೊಫೆಷನಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶುಲ್ಕ ರಹಿತ ಅರ್ಜಿಗಳನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 30-09-2023 ರೊಳಗಾಗಿ ಸಲ್ಲಿಸುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.