ಧಾರವಾಡ : 2025-26ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ವಿನಾಯಿತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ 16, 2025 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ [email protected] ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ : ಡಿಪ್ಲೊಮಾ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆಹ್ವಾನ
ಶಿವಮೊಗ್ಗ : ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರವು (ಜಿಟಿಟಿಸಿ) 2026-27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಲಭ್ಯವಿರುವ ಕೋರ್ಸ್‌ಗಳು
ಡಿಪ್ಲೊಮಾ ಇನ್ ಟೂಲ್ & ಡೈ ಮೇಕಿಂಗ್,
ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್,
ಡಿಪ್ಲೊಮಾ ಇನ್ ಪ್ರಿಸಿಸನ್ ಮ್ಯಾನುಫ್ಯಾಕ್ಚರಿಂಗ್.
ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಮೂರು ವರ್ಷದ ತರಬೇತಿ + ಒಂದು ವರ್ಷದ ಕಡ್ಡಾಯ ಕೈಗಾರಿಕಾ ತರಬೇತಿ ಆಗಿರಬೇಕು.
ಪ್ರತಿ ಕೋರ್ಸ್‌ಗೆ 60 ಸೀಟುಗಳು ಲಭ್ಯವಿದ್ದು,
ಐಟಿಐ ಅಥವಾ ಪಿಯುಸಿ (ವಿಜ್ಞಾನ) ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಎರಡನೇ ವರ್ಷದ ಡಿಪ್ಲೊಮಾಗೆ ನೇರ ಪ್ರವೇಶದ ಅವಕಾಶವಿದೆ.
ಮೀಸಲಾತಿ: ಮೆರಿಟ್ ಮತ್ತು ರೋಸ್ಟರ್ ಪದ್ಧತಿಯಂತೆ ಸೀಟು ಹಂಚಿಕೆ ನಡೆಯಲಿದ್ದು, ಶೇಕಡಾ 30 ರಷ್ಟು ಸೀಟುಗಳನ್ನು ವಿದ್ಯಾರ್ಥಿನಿಯರಿಗಾಗಿ ಕಾಯ್ದಿರಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/05/2026 ಆಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು https://gttc-hrms.karnataka.gov.in/Admissions ಜಾಲತಾಣಕ್ಕೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ 9448307027, 9880141054, 9449286543 ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.

