HomeKarnatakaಅರೆಕಾಲಿಕ ಕಾನೂನು ಸ್ವಯಂಸೇವಕರ 173 ಹುದ್ದೆಗಳ ಭರ್ತಿಗೆ ಅರ್ಜಿ

ಅರೆಕಾಲಿಕ ಕಾನೂನು ಸ್ವಯಂಸೇವಕರ 173 ಹುದ್ದೆಗಳ ಭರ್ತಿಗೆ ಅರ್ಜಿ

ರಾಮನಗರ: ರಾಮನಗರ  ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ಅರೆಕಾಲಿಕ ಕಾನೂನು ಸ್ವಯಂಸೇವಕರ ನೇಮಕತಿ ಮಾಡಿಕೊಳ್ಳಲಾಗುವುದು. 175 ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಹಾಗೂ ಆಯಾ ತಾಲೂಕುಗಳಿಂದ ಗೌರವಧನದ ಮೇರೆಗೆ ನೇಮಕಾತಿಗೆ ಆಸಕ್ತ ಅಭ್ಯರ್ಥಿಗಳಿಂದ ವರ್ಗೀಕರಣದ ಅನ್ವಯ ನಿಗದಿತ ನಮೂನೆಯಲ್ಲಿ ಇಚ್ಛೆಯ ಪತ್ರವನ್ನು ಒಳಗೊಂಡಂತೆ ಅರ್ಜಿ ಆಹ್ವಾನಿಸಲಾಗಿದೆ.

ರಾಮನಗರ 100, ಚನ್ನಪಟ್ಟಣ 25, ಕನಕಪುರ 25, ಮಾಗಡಿ 25 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಕನಿಷ್ಠ ಪಕ್ಷ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರಬೇಕು. ಯಾವುದೇ ಕ್ರಿಮಿನಲ್ ಅಪರಾಧದ ಹಿನ್ನೆಲೆಯುಳ್ಳವರಾಗಿರಬಾರದು. ನಿವೃತ್ತ ಶಿಕ್ಷಕರು ಸೇರಿದಂತೆ ಶಿಕ್ಷಕರು, ನಿವೃತ್ತ ಸರ್ಕಾರಿ ನೌಕರರು, ಹಿರಿಯ ನಾಗರಿಕರು, ಎಂ.ಎಸ್.ಡಬ್ಲ್ಯೂ. ವಿದ್ಯಾರ್ಥಿಗಳು, ಉಪನ್ಯಾಸಕರು, ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ವಿದ್ಯಾರ್ಥಿಗಳು, ಕಾನೂನು ವಿದ್ಯಾರ್ಥಿಗಳು, ರಾಜಕೀಯವಲ್ಲದ ಸಂಘಗಳು, ಮಹಿಳಾ ಸ್ವಸಹಾಯ ಸಂಘಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅರೆಕಾಲಿಕ ಕಾನೂನು ಸ್ವಯಂಸೇವಕರೆಂದು ನಿರ್ಧರಿಸುವ ಇತರೆ ಯಾವುದೇ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನೇಮಕಾತಿ ತಾತ್ಕಾಲಿಕವಾಗಿದ್ದು, ಗೌರವ ಧನದ ಆಧಾರದ ಮೇಲೆ ಮೂರು ವರ್ಷದ ಅವಧಿಗೆ ನಿಯೋಜಿಸಲಾಗುತ್ತದೆ, ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನವಾಗಿದೆ, ರಾಮನಗರ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ https://ramanagara.dcourts.gov.in ಗಮನಿಸಬಹುದಾಗಿದೆ,

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular