HomeLatest Newsಉದ್ಯೋಗ ವಾರ್ತೆ : ರಾಜ್ಯ ಸರ್ಕಾರದಿಂದ 560 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ , ಇಲ್ಲಿದೆ...

ಉದ್ಯೋಗ ವಾರ್ತೆ : ರಾಜ್ಯ ಸರ್ಕಾರದಿಂದ 560 ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ , ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಿಹಿಸುದ್ದಿ ನೀಡಿದೆ. ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರೂಪ್-ಸಿ ವಿಭಾಗದ 560 ಭೂಮಾಪಕರ (Surveyor) ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹ ಅಭ್ಯರ್ಥಿಗಳು KEA ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆಯಾಗಲಿದ್ದು, ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಜುಲೈ 11, 2026ರಿಂದ ಆಗಸ್ಟ್ 7, 2026ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್ 10, 2026 ಕೊನೆಯ ದಿನವಾಗಿದೆ.

ಹುದ್ದೆಗಳ ವಿವರ

  • ಹುದ್ದೆ: ಭೂಮಾಪಕರು (Surveyor)
  • ಒಟ್ಟು ಹುದ್ದೆಗಳು: 560
  • ವೇತನ ಶ್ರೇಣಿ: ₹37,500 ರಿಂದ ₹76,100

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಕೆಳಗಿನ ಯಾವುದಾದರೂ ವಿದ್ಯಾರ್ಹತೆಯನ್ನು ಹೊಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ
  • ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ / ಎಎಂಐಇ (AMIE)
  • ಗಣಿತ, ಭೂತಶಾಸ್ತ್ರ, ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ, ಇನ್ಸ್‌ಟ್ರುಮೆಂಟೇಶನ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಅಥವಾ ಕೃಷಿ ಬಿ.ಎಸ್‌.ಸಿ ಪದವಿ
  • AICTE ಮಾನ್ಯತೆ ಪಡೆದ ಸಂಸ್ಥೆಯಿಂದ ಇಂಜಿನಿಯರಿಂಗ್ ಅಥವಾ ತಂತ್ರಜ್ಞಾನ ವಿಭಾಗದಲ್ಲಿ ಡಿಪ್ಲೋಮಾ

ವಯೋಮಿತಿ

  • ಸಾಮಾನ್ಯ ವರ್ಗ: 40 ವರ್ಷ
  • 2A, 2B, 3A, 3B: 43 ವರ್ಷ
  • ಎಸ್‌ಸಿ, ಎಸ್‌ಟಿ ಹಾಗೂ ಪ್ರವರ್ಗ-1: 45 ವರ್ಷ
  • ಕನಿಷ್ಠ ವಯಸ್ಸು: 18 ವರ್ಷ

ಅರ್ಜಿ ಶುಲ್ಕ

  • ಸಾಮಾನ್ಯ ಹಾಗೂ 2A/2B/3A/3B ಅಭ್ಯರ್ಥಿಗಳು: ₹750
  • ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಹಾಗೂ ಮಾಜಿ ಸೈನಿಕರು: ₹500
  • ವಿಶೇಷ ಚೇತನ ಅಭ್ಯರ್ಥಿಗಳು: ₹250

ಪರೀಕ್ಷೆ ಯಾವಾಗ?

  • 03 ಅಕ್ಟೋಬರ್ 2026 (ಶನಿವಾರ): ಪತ್ರಿಕೆ-II (ಮಧ್ಯಾಹ್ನ 3.00 ರಿಂದ 5.00)
  • 04 ಅಕ್ಟೋಬರ್ 2026 (ಭಾನುವಾರ): ಪತ್ರಿಕೆ-I (ಬೆಳಿಗ್ಗೆ 10.30 ರಿಂದ 12.30)

ಪರೀಕ್ಷೆಯ ಮಾದರಿ

ಪತ್ರಿಕೆ-I ನಲ್ಲಿ 100 ಪ್ರಶ್ನೆಗಳು ಇರಲಿದ್ದು, ಒಟ್ಟು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ಅವಧಿ 2 ಗಂಟೆಗಳು. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳ ಋಣಾತ್ಮಕ ಮೌಲ್ಯಮಾಪನ (Negative Marking) ಅನ್ವಯವಾಗಲಿದೆ.

ಮೀಸಲಾತಿ ನಿಯಮಗಳು

ಅಧಿಸೂಚನೆಯ ಪ್ರಕಾರ, ಮೀಸಲಾತಿ ಪಡೆಯುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ತಹಶೀಲ್ದಾರರಿಂದ ಪಡೆದ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಜೊತೆಗೆ ಮಾಜಿ ಸೈನಿಕರಿಗೆ 10% ಹುದ್ದೆಗಳು ಮೀಸಲಾಗಿದ್ದು, ಗ್ರಾಮೀಣ ಅಭ್ಯರ್ಥಿಗಳು, ಕನ್ನಡ ಮಾಧ್ಯಮ ಅಭ್ಯರ್ಥಿಗಳು ಹಾಗೂ ಯೋಜನೆಗಳಿಂದ ನಿರ್ವಸಿತರಾದ ಅಭ್ಯರ್ಥಿಗಳಿಗೆ ಅನ್ವಯಿಸುವ ಮೀಸಲಾತಿ ನಿಯಮಗಳನ್ನೂ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಅರ್ಜಿ ಸಲ್ಲಿಸುವ ವೆಬ್‌ಸೈಟ್

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು

  • ಅರ್ಜಿ ಆರಂಭ: 11 ಜುಲೈ 2026
  • ಅರ್ಜಿ ಸಲ್ಲಿಸಲು ಕೊನೆಯ ದಿನ: 07 ಆಗಸ್ಟ್ 2026
  • ಶುಲ್ಕ ಪಾವತಿಸಲು ಕೊನೆಯ ದಿನ: 10 ಆಗಸ್ಟ್ 2026

ಸರ್ಕಾರಿ ಉದ್ಯೋಗಕ್ಕಾಗಿ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪರಿಶೀಲಿಸಿ, ಕೊನೆಯ ದಿನಾಂಕಕ್ಕೂ ಮುನ್ನ ಅರ್ಜಿ ಸಲ್ಲಿಸುವಂತೆ KEA ಸೂಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular