HomeKarnatakaಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಶಿಷ್ಯವೇತನ, ಆರ್ಥಿಕ ಅನುದಾನಕ್ಕೆ ಅರ್ಜಿ

ಮಾಜಿ ಸೈನಿಕರ ಮಕ್ಕಳಿಗೆ ಗುಡ್ ನ್ಯೂಸ್: ಪ್ರಧಾನ ಮಂತ್ರಿ ಶಿಷ್ಯವೇತನ, ಆರ್ಥಿಕ ಅನುದಾನಕ್ಕೆ ಅರ್ಜಿ

ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿಯಲ್ಲಿ ಶೇ.60 ಪ್ರತಿಶತಕ್ಕಿಂತ ಅಧಿಕ ಅಂಕ ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ ಎಂಬ ಶೀರ್ಷಿಕೆಯಡಿ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ.30  ಕೊನೆಯ ದಿನ.

ಅರ್ಹ ಫಲಾನುಭವಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ https://online.ksb.gov.in ಅನ್ನು ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular