HomeKarnatakaಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ | KEA Recruitment

ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ | KEA Recruitment

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಆಗಸ್ಟ್ 20ರವರೆಗೆ #KEA ವಿಸ್ತರಿಸಿದೆ.

ಶುಲ್ಕ ಪಾವತಿಸಲು ಆಗಸ್ಟ್ 21 ಕೊನೆ ದಿನ. ಸಾರ್ವಜನಿಕರ ಕೋರಿಕೆ ಮೇರೆಗೆ ಆ.7ಕ್ಕೆ ಇದ್ದ ಕೊನೆ ದಿನಾಂಕ ವಿಸ್ತರಿಸಲಾಗಿದೆ. ಕಲ್ಯಾಣ ಕರ್ನಾಟಕ ವೃಂದಕ್ಕೆ ಅರ್ಜಿ ಸಲ್ಲಿಸುವವರಿಗೂ ಅನ್ವಯವಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ವಿವರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರಾಮ ಆಡಳಿತಾಧಿಕಾರಿ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 10.07.2026 ರಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಹ ಅಭ್ಯಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿ, ಸದರಿ ಹುದ್ದೆಗಳಿಗೆ ದಿನಾಂಕ 30.07.2026 ರವರೆಗೆ ಅರ್ಜಿ ಸಲ್ಲಿಸಲು ಮತ್ತು ದಿನಾಂಕ 31.07.2026 ರವರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿತ್ತು.

ಮುಂದುವರೆದು ದಿನಾಂಕ 29.07.2026 ರಂದು ಪ್ರಕಟಣೆ ಹೊರಡಿಸಿ ದಿನಾಂಕ 07.08.2026 ರವರೆಗೆ ದಿನಾಂಕ ವಿಸ್ತರಿಸಿ ಅರ್ಜಿಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.

ಪ್ರಸ್ತುತ ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ದಿನಾಂಕವನ್ನು ಈ ಕೆಳಗಿನಂತೆ ವಿಸ್ತರಿಸಲಾಗಿದೆ.

1. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20.08.2026

2. ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 21.08.2026

ಸೂಚನೆ: ಉಳಿದಂತೆ ದಿನಾಂಕ 10.07.2026 ರ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular