ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಆಗಸ್ಟ್ 7 ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ವಿಸ್ತರಿಸಿದೆ.
ಶುಲ್ಕ ಪಾವತಿಸಲು ಆಗಸ್ಟ್ 10 ಕೊನೆ ದಿನ. ಸಾರ್ವಜನಿಕರ ಕೋರಿಕೆ ಮೇರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ವಿವಿಧ ಜಿಲ್ಲೆಗಳಲ್ಲಿನ ಉಳಿಕೆ ಮೂಲ ವೃಂದ /ಕಲ್ಯಾಣ-ಕರ್ನಾಟಕ ಸ್ಥಳೀಯ ವೃಂದದಲ್ಲಿ ಖಾಲಿಯಿರುವ ಗ್ರೂಪ್-ಸಿ ವೃಂದದ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರತ್ಯೇಕವಾಗಿ ದಿನಾಂಕ: 10.07.2026 ರಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ, ಸದರಿ ಹುದ್ದೆಗಳಿಗೆ ದಿನಾಂಕ: 30.07.2026 ರವರೆಗೆ ಅರ್ಜಿ ಸಲ್ಲಿಸಲು ಮತ್ತು ದಿನಾಂಕ: 31.07.2026 ರವರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿಸಲು ದಿನಾಂಕವನ್ನು ಕೆಳಕಂಡಂತೆ ವಿಸ್ತರಿಸಲಾಗಿದೆ.
1. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 07.08.2026
2. ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ: ದಿನಾಂಕ: 10.08.2026
ಸೂಚನೆ:- ಉಳಿದಂತೆ ದಿನಾಂಕ: 10.07.2026 ರ ಅಧಿಸೂಚನೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

