ಉದ್ಯೋಗ ವಾರ್ತೆ : 1000 ‘ಗ್ರಾಮ ಆಡಳಿತಾಧಿಕಾರಿ’ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು : 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಮತ್ತೆ ಅರ್ಜಿ ಸಲ್ಲಿಸಲು ಕೆಇಎ ಅವಕಾಶ ನೀಡಿದೆ.

PSI ಸೇರಿದಂತೆ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು KEA ಪ್ರಕಟಿಸಿದೆ. PSI ಪರೀಕ್ಷೆ OCT 3ಕ್ಕೆ ನಡೆಯಲಿದೆ. ವಯೋಮಿತಿ ಸಡಿಲ ಮಾಡಿರುವ ಕಾರಣ VAO ಮತ್ತು GTTC ಹುದ್ದೆಗಳಿಗೆ ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಪ್ರಕಟಣೆ ಹೊರಡಿಸಿದೆ.

ರಾಜ್ಯ ಸರ್ಕಾರದ ಮಹತ್ತರ ಆದೇಶದ ಹಿನ್ನೆಲೆಯಲ್ಲಿ ಕೆಇಎ ಫೆಬ್ರುವರಿ-ಮಾರ್ಚ್ನಲ್ಲಿ ಹೊರಡಿಸಿದ್ದ ಕಂದಾಯ ಇಲಾಖೆಯ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಇದೀಗ ಮತ್ತೆ ಅರ್ಜಿ ಸ್ವೀಕಾರ ಮಾಡಲಿದೆ. ಈ ಕುರಿತು ಮುಂದಿನ ಕೆಇಎ ಪರೀಕ್ಷೆಗಳ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯಲ್ಲಿ ಮಾಹಿತಿ ಸಿಕ್ಕಿದೆ. ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.

https://twitter.com/KEA_karnataka/status/1835947913756725676

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read