HomeLatest Newsಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಪ್ರಸಕ್ತ (2025-26) ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 2ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್, 04 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ: https://.shp.karnataka.gov.in/bcwd ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ.2.50 ಲಕ್ಷ, ಪ್ರವರ್ಗ-2ಎ,2ಬಿ,3ಎ,3ಬಿ, ಇತರೆ ಹಿಂದುಳಿದ ವರ್ಗ ರೂ.1 ಲಕ್ಷ ಆಗಿದೆ. ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://.bcwd.karnataka.gov.in/ ಅನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಈ ಇ-ಮೇಲ್ ಮುಖಾಂತರ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮಡಿಕೇರಿ ತಾಲ್ಲೂಕು ಮೊ.ಸಂಖ್ಯೆ 9632225847, ವಿರಾಜಪೇಟೆ ತಾಲ್ಲೂಕು ಮೊ.ಸಂಖ್ಯೆ 9448205919 ಮತ್ತು ಸೋಮವಾರಪೇಟೆ ತಾಲ್ಲೂಕು ಮೊ.ಸಂಖ್ಯೆ 8762476790 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular