ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.
ಈಗಾಗಲೇ ವಿವಿಧ ಕೋರ್ಸ್ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಆಲ್ಕೋಳ ವೃತ್ತದಲ್ಲಿರುವ ಕರಾಮುವಿ ಪ್ರಾದೇಶಿಕ ವಿಭಾಗದಲ್ಲಿ ಪ್ರವೇಶಾತಿಯನ್ನು ಪಡೆಯಬಹುದು. ಕಛೇರಿಯು ಎಲ್ಲಾ ಭಾನುವಾರ, ಎರಡನೇ ಶನಿವಾರ, ನಾಲ್ಕನೇ ಶನಿವಾರ ಹಾಗೂ ಎಲ್ಲಾ ಸರ್ಕಾರಿ ರಜೆ ದಿನಗಳಂದು ಎಂದಿನಂತೆ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ ಇದರ ಸದುಪಯೋಗವನ್ನು ಹೆಚ್ಚಿನ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕರಾಮುವಿನ ವೆಬ್‌ಸೈಟ್ , ಮೊ.ಸಂ. 9739803295, 7338069870, 9480765905 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.