HomeLatest Newsಕರಾಮುವಿವಿಯಲ್ಲಿ ವಿವಿಧ ಕೋರ್ಸ್'ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಕರಾಮುವಿವಿಯಲ್ಲಿ ವಿವಿಧ ಕೋರ್ಸ್’ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಪ್ರಾದೇಶಿಕ ಕೇಂದ್ರ ಶಿವಮೊಗ್ಗದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಜ. 09 ರಂದು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಕರಾಮುವಿ, ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಿ, ಆಲ್ಕೋಳ ವೃತ್ತ, ಸಾಗರ ರಸ್ತೆಯಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರ ಶಿವಮೊಗ್ಗ ಇಲ್ಲಿ ಪ್ರವೇಶಾತಿಯನ್ನು ಪಡೆದುಕೊಳ್ಳುವಂತೆ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9900667916/ 9480765905/ 9739803295/7338069870/7353886706/7760620811 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

ಕುಂದುಕೊರತೆ ಅರ್ಜಿ ಸ್ವೀಕಾರ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ :  ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜ.21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00ರವರೆಗೆ ಜಿಲ್ಲೆಯ ಶಿಕಾರಿಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದಾರೆ.

ಸಾರ್ವಜನಿಕರು ಈ ಸಭೆಗೆ ಹಾಜರಾಗಿ ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಹಣ/ಅಧಿಕಾರ ದುರುಪಯೋಗ, ಕಳಪೆ ಕಾಮಾಗಾರಿ, ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆ, ಸರ್ಕಾರಿ ಕರ್ತವ್ಯ ನಿರ್ವಹಿಸಲು ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಲಿಖಿತವಾಗಿ ಅಹವಾಲು ಸಲ್ಲಿಸಬಹುದೆಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular