HomeLatest NewsPh.D. ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ಫೆಲೋಶಿಫ್‌'ಗಾಗಿ ಅರ್ಜಿ ಆಹ್ವಾನ

Ph.D. ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ/ಫೆಲೋಶಿಫ್‌’ಗಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ. ಅಧ್ಯಯನ ಮಾಡುತ್ತಿರುವ (ಫೆ.10, 2025 ಮತ್ತು ಅದರ ನಂತರ ಪ್ರಥಮ ವರ್ಷದ ಪಿಹೆಚ್.ಡಿ ಪ್ರಾರಂಭಿಸಿರಬೇಕು) ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಹೊಸ ವಿದ್ಯಾರ್ಥಿಗಳಿಂದ ಮಾತ್ರ ಮಾಸಿಕ ವ್ಯಾಸಂಗ ವೇತನ/ಫೆಲೋಶಿಫ್ ಪಡೆಯಲು ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ದೃಢೀಕೃತ ದಾಖಲಾತಿಗಳನ್ನು ಲಗತ್ತಿಸಿ ದಿ: 09/12/2026 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ವೆಬ್‌ಸೈಟ್ https://bcwd.karnataka.gov.in, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-222129 ನ್ನು ಸಂಪರ್ಕಿಸುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular