ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೊರಬ ತಾಲೂಕು ಜಡೆಯಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗೆ ಕನ್ನಡ, ಆಂಗ್ಲ, ಹಿಂದಿ ಮತ್ತು ಗಣಿತ ವಿಷಯಗಳಿಗೆ ಅತಿಥಿ ಶಿಕ್ಷಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸೊರಬ ತಾಲುಕು ಹಿರೇಮಾಗಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಸೆ. 18ರೊಳಗಾಗಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9663398179 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.