ಬಳ್ಳಾರಿ : ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹೊಸದಾಗಿ ಮಂಜೂರಾಗಿರುವ ಕೌಲ್‌ಬಜಾರ್‌ನ ಮೌಲಾನಾ ಆಜಾದ್ ಮಾದರಿ ಶಾಲೆಗೆ (ಆಂಗ್ಲ ಮಾಧ್ಯಮ) 2026-27ನೇ ಶೈಕ್ಷಣಿಕ ವರ್ಷಕ್ಕೆ ಖಾಲಿ ಇರುವ ವಿವಿಧ ಅತಿಥಿ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಟ್ರೈನಿಂಗ್ ಸ್ಕೂಲ್ ಆವರಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ನೂತನ ಮೌಲಾನಾ ಆಜಾದ್ ಮಾದರಿ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಡಿ.ಇಡಿ ಮತ್ತು ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನವಾಗಿದೆ.
*ಖಾಲಿ ಇರುವ ಹುದ್ದೆಗಳ ವಿವರ
ಆಂಗ್ಲ ಭಾಷಾ ಶಿಕ್ಷಕರು-01, ಉರ್ದು/ಹಿಂದಿ ಭಾಷಾ ಶಿಕ್ಷಕರು-01, ಗಣಿತ ಶಿಕ್ಷಕರು-01, ವಿಜ್ಞಾನ ಶಿಕ್ಷಕರು-01, ಸಮಾಜ ವಿಜ್ಞಾನ ಶಿಕ್ಷಕರು-01.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮುಖ್ಯೋಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ (ಆಂಗ್ಲ ಮಾಧ್ಯಮ), ಕೌಲ್‌ಬಜಾರ್, ಬಳ್ಳಾರಿ (ಮೊ.8861623814) ಇವರನ್ನು ಸಂಪರ್ಕಿಸಬಹುದು ಅಥವಾ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ: ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಪ್ರವೇಶಾತಿ ಆರಂಭ; ಉಚಿತ ಅರ್ಜಿ ಸಲ್ಲಿಕೆಗೆ ಅವಕಾಶ
ಬಳ್ಳಾರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ (11ನೇ ತರಗತಿ) 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳಿಗೆ ಈ ಉಚಿತ ಪ್ರವೇಶಾತಿ ಲಭ್ಯವಿದ್ದು, ಆಸಕ್ತ ವಿದ್ಯಾರ್ಥಿನಿಯರು ಹಾಗೂ ಪಾಲಕರು ನೇರವಾಗಿ ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಕಾಲೇಜಿನ ಒಟ್ಟು ಸೀಟುಗಳಲ್ಲಿ ನಿಯಮಾನುಸಾರ ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ.75 ರಷ್ಟು ಸೀಟುಗಳು ಮತ್ತು ಇತರ ಸಮುದಾಯಗಳಿಗೆ ಶೇ.25 ರಷ್ಟು ಸೀಟುಗಳು ಮೀಸಲಾತಿ ಕಲ್ಪಿಸಲಾಗಿದೆ.
*ಕಾಲೇಜಿನ ವಿಳಾಸ ಮತ್ತು ಸಂಪರ್ಕ ಸಂಖ್ಯೆ
ಪ್ರಾಂಶುಪಾಲರರು, ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು, ಬಳ್ಳಾರಿ (ಶ್ರೀಮತಿ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ಸರ್ಕಾರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಆವರಣ, ಬಳ್ಳಾರಿ) ಮೊ.8861623814, 9481174879.ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲಾನಾ ಆಜಾದ್ ಭವನದ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

