HomeKarnatakaಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಧಾರವಾಡ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕೃತ ಮಾರ್ಗಸೂಚಿಯಂತೆ ಹಾಗೂ ಜಿಲ್ಲಾಧಿಕಾರಿಗಳವರ ಅನುಮೋದನೆಯಂತೆ ಧಾರವಾಡ ಜಿಲ್ಲೆಯ 6 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆ ಮತ್ತು 210 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳ ಭರ್ತಿಗಾಗಿ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ಸಪ್ಟೆಂಬರ್ 3, 2026 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನೆಗಳಾದ ಧಾರವಾಡ(ಗ್ರಾಮೀಣ) ದೂರವಾಣಿ ಸಂ:0836-2444838, ಹುಬ್ಬಳ್ಳಿ(ಗ್ರಾಮೀಣ) ದೂರವಾಣಿ ಸಂ: 0836-2377288, ಹುಬ್ಬಳ್ಳಿ-ಧಾರವಾಡ(ಶಹರ) ದೂರವಾಣಿ ಸಂ:0836-2440733, ಕಲಘಟಗಿ ದೂರವಾಣಿ ಸಂ:08370-284532, ಕುಂದಗೋಳ ದೂರವಾಣಿ ಸಂ:08304-290561 ಹಾಗೂ ನವಲಗುಂದ ದೂರವಾಣಿ ಸಂ: 08380-229618 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular