HomeLatest Newsಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿಗೆ ತರಬೇತಿ ಪಡೆಯಲು ಅರ್ಜಿ ಆಹ್ವಾನ

ದುನಿಯಾ ಡಿಜಿಟಲ್ ಡೆಸ್ಕ್ : ಪದವೀಧರರಾಗಿದ್ದು, ಬ್ಯಾಂಕಿಂಗ್ ಅಥವಾ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆಯಲು ಬಯಸುವವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು KSOU ನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ.

ಈ ತರಬೇತಿಯು ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಾದ ಎಲ್ಲಾ ಕೌಶಲ್ಯ ಮತ್ತು ಜ್ಞಾನವನ್ನು ಒದಗಿಸುತ್ತದೆ. ಯಾವುದೇ ಪದವಿ ಪೂರ್ಣಗೊಳಿಸಿದ ಆಸಕ್ತ ಅಭ್ಯರ್ಥಿಗಳು ಈ ತರಬೇತಿಗೆ ಸೆ. 30 ರೊಳಗಾಗಿ ನೋಂದಾಯಿಸಿಕೊಳ್ಳುವಂತೆ ಕುಲಸಚಿವ ಪ್ರೊ. ನವೀನ್ಕುಮಾರ್ ಎಸ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0821-2515944/9964760090ನ ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular