ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು.
(ಗಮನಿಸಿ: ಹುದ್ದೆವಾರು ಮತ್ತು ಪ್ರವರ್ಗವಾರು ವಿವರಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೀಡಿದಂತೆ ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ.)
- ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿರುವ ಅರ್ಹತಾ ಪರೀಕ್ಷೆಗಳಲ್ಲಿ ಒಟ್ಟಾರೆ ಕನಿಷ್ಠ ಶೇ. 50 ಅಂಕಗಳಿಸಿದ್ದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
- ತಾಂತ್ರಿಕ ಹುದ್ದೆಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಸಾಕ್ಷರತೆಗಾಗಿ ಎಂಜಿನಿಯರಿಂಗ್ / ಡಿಪ್ಲೋಮಾದಲ್ಲಿ ಗಣಕಯಂತ್ರ ವ್ಯಾಸಂಗವನ್ನು ವಿದ್ಯಾರ್ಹತೆಯಲ್ಲಿನ ಒಂದು ವಿಷಯವಾಗಿ ಅಭ್ಯಸಿಸಿರುವುದನ್ನು ಗಣಕಯಂತ್ರ ವ್ಯಾಸಂಗವಾಗಿ ಹಾಗೂ ಇತರೆ ತಾಂತ್ರಿಕೇತರ ಹುದ್ದೆಗಳಿಗೆ ಅಭ್ಯರ್ಥಿಗಳು ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯ ಅಥವಾ ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆಯಲ್ಲಿ ಗಣಕಯಂತ್ರ ವ್ಯಾಸಂಗವನ್ನು ಒಂದು ವಿಷಯವನ್ನಾಗಿ ಅಭ್ಯಸಿಸಿದ್ದಲ್ಲಿ ಅದನ್ನು ಗಣಕಯಂತ್ರ ವ್ಯಾಸಂಗವಾಗಿ ಪರಿಗಣಿಸಲಾಗುವುದು.
- ಮೇಲ್ಕಂಡ ಹುದ್ದೆಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆ ಹೊರತುಪಡಿಸಿ, ಇತರೆ ವಿದ್ಯಾರ್ಹತೆಯಲ್ಲಿ ಅರ್ಜಿ ಸಲ್ಲಿಸಿ, ಮುಂದಿನ ಪ್ರಕ್ರಿಯೆಯಲ್ಲಿ ಅನರ್ಹಗೊಂಡಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲ.
ii. ಪಿಂಚಣಿ ಸೌಲಭ್ಯ:
ಸರ್ಕಾರದ ಆದೇಶ ಸಂಖ್ಯೆ: ಎಫ್ಡಿ(ಎಸ್ಪಿಎಲ್)/04/ಪಿಇಟಿ/2005, ದಿನಾಂಕ: 31.03.2006 ರಂತೆ.
iii. ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು;
iv. ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ/262/ಸೇನೆನಿ/2025 ದಿನಾಂಕ 29.09.2025 ರಲ್ಲಿ ನಿರ್ದೇಶಿಸಿರುವಂತೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ.












