HomeJobsJOB ALERT : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶ, ಕೂಡಲೇ ಅರ್ಜಿ ಸಲ್ಲಿಸಿ.!

JOB ALERT : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶ, ಕೂಡಲೇ ಅರ್ಜಿ ಸಲ್ಲಿಸಿ.!

ಬಳ್ಳಾರಿ :   ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26ನೇ ಸಾಲಿನ ಪೋಷಣ್ ಅಭಿಯಾನ 2.0 ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನೆ ಸಂಡೂರು ತಾಲ್ಲೂಕಿನಲ್ಲಿ ಖಾಲಿಯಿರುವ 01-ಸಂಯೋಜಕರ ಹುದ್ದೆಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಂಡೂರು ಪಟ್ಟಣದ ಪಶು ಸಂಗೋಪನಾ ಆಸ್ಪತ್ರೆ ಮುಂಭಾಗದ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಫೆ.19 ರೊಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಇದೇ ಕಚೇರಿಗೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

*ಅರ್ಹತೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಯೋಮಿತಿ 35 ವರ್ಷ ವಯಸ್ಸು ಮೀರಿರಬಾರದು. ಸ್ಥಳೀಯರಾಗಿರಬೇಕು, ಪದವಿಧರರಾಗಿರಬೇಕು, ತಂತ್ರಜ್ಞಾನ ಮತ್ತು ಸಾಫ್ಟ್ ವೇರ್ ಅಪ್ಲಿಕೇಶನ್‌ನಲ್ಲಿ ಕಾರ್ಯ ನಿರ್ವಹಿಸಿದ 02 ವರ್ಷದ ಅನುಭವ ಹೊಂದಿರಬೇಕು. ಗಣಕಯಂತ್ರದಲ್ಲಿ ಡಿಟಿಪಿ, ಎಮ್.ಎಸ್.ಆಫೀಸ್, ಡಾಟಾ ಎಂಟ್ರಿ (ಕನ್ನಡ ಮತ್ತು ಇಂಗ್ಲೀಷ) ಪರಿಣಿತಿ ಹೊಂದಿರಬೇಕು. ಕ್ಷೇತ್ರ ಭೇಟಿಗೆ ಸಿದ್ಧರಿರಬೇಕು. ಗೌರವಧನ ರೂ.20,000 ಇರಲಿದೆ.

*ನಿಬಂಧನೆಗಳು

ಬಳ್ಳಾರಿ ಜಿಲ್ಲೆಯ ಸ್ಥಳೀಯರಿಗೆ ಆದ್ಯತೆ. ಇಂಗ್ಲೀಷ್ ಮತ್ತು ಕನ್ನಡ ಕಂಪ್ಯೂಟರ್ ಜ್ಞಾನ ಹಾಗೂ ಕೆಲಸ ಮಾಡುವ ಕೌಶಲ್ಯ ಹೊಂದಿರಬೇಕು. ಅಭ್ಯರ್ಥಿಯ ಆಯ್ಕೆಯನ್ನು ಮೆರಿಟ್ ಆಧಾರದ ಮೇಲೆ ಮಾಡಲಾಗುವುದು. ಕಂಪ್ಯೂಟರ್ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು ಹಾಗೂ ಅದರ ಅಂಕಗಳನ್ನು ಪರಿಗಣಿಸಲಾಗುವುದು. ಜಿಲ್ಲಾ ಟಾಸ್ಕ್ಪೋರ್ಸ್ ಸಮಿತಿಯಿಂದ ಆಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ತಂತ್ರಜ್ಞಾನ ಮತ್ತು ಸಾಫ್ಟ್ವೇರ್ ಅಪ್ಲಿಕೇಶನ್ ಕ್ಷೇತ್ರದಲ್ಲಿ ಅನುಭವ ಹೊಂದಿದವರಿಗೆ ಪ್ರಾಮುಖ್ಯತೆ ನೀಡಲಾಗುವುದು. ವಯೋಮಿತಿ 35 ವರ್ಷ ವಯಸ್ಸು ಮೀರಿರಬಾರದು (ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ). ಇಂಗ್ಲಿಷ್, ಹಿಂದಿ ಹಾಗೂ ಕನ್ನಡ ಹಾಗೂ ಸ್ಥಳೀಯ ಭಾಷೆಗಳಲ್ಲಿ ಓದಲು, ಬರೆಯಲು ಮತ್ತು ಮಾತನಾಡಲು ನಿಪುಣರಾಗಿರಬೇಕು.

ಈ ಹುದ್ದೆಯು ತಾತ್ಕಾಲಿಕ ಹುದ್ದೆ ಆಗಿರುವುದರಿಂದ ತಮ್ಮ ಸೇವೆಯು ತೃಪ್ತಿಕರವಾಗಿಲ್ಲವೆಂದು ಕಂಡುಬಂದಲ್ಲಿ, ಯಾವುದೇ ಮುನ್ನೆಚ್ಚರಿಕೆ, ನೊಟೀಸ್ ನೀಡದೇ ತೆಗೆದು ಹಾಕುವ ಅಧಿಕಾರವು ಜಿಲ್ಲಾಧಿಕಾರಿಯವರಿಗಿರುತ್ತದೆ.ಕಾರ್ಯಗಾರ, ತರಬೇತಿಗಳಿಗಾಗಿ ಜಿಲ್ಲೆಯಾದ್ಯಂತ ಪ್ರಯಾಣ ಕೈಗೊಳ್ಳಲು ಸಿದ್ದರಿರಬೇಕು. ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗೌರವಧನವನ್ನು ಹೊರತುಪಡಿಸಿ, ಬೇರೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂ.08395-261156 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular