ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪಿಎಲ್ವಿ) ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ, ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು, ಕಾನೂನು ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು, ನಿವೃತ್ತ ಸರ್ಕಾರಿ ನೌಕರರು, ಮಾಜಿ ಯೋಧರು ಹಾಗೂ ಅವರ ಅವಲಂಭಿತರು, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು, ಹಿರಿಯ ನಾಗರಿಕರು, ಹಾಗೂ ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಹಾಗೂ ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂಧಿಗಳು ಮತ್ತು ಸ್ವ ಸಹಾಯ ಸಂಘಗಳ ಸದಸ್ಯರನ್ನು ಅರೇ ಕಾಲಿಕ ಕಾನೂನು ಸ್ವಯಂ ಸೇವಕರಾಗಿ (ಪ್ಯಾರಾ ಲೀಗಲ್ ವಾಲಂಟಿರ್ಸ್) ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಬೇಕಾಗಿರುತ್ತದೆ.
ಹಾಗಾಗಿ, ಸೇವಾ ಮನೋಭಾವನೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದುಕೊಂಡು, ಭರ್ತಿಮಾಡಿ ಅಕ್ಟೋಬರ್ 06 ರ ಸಂಜೆ 5.30 ರೊಳಗಾಗಿ ಖುದ್ದಾಗಿ ಇದೇ ಕಚೇರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.