HomeKarnatakaಮಹಿಳೆಯರೇ ಗಮನಿಸಿ ; 'ಅಕ್ಕ ಕೆಫೆ’ ಆರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನ.!

ಮಹಿಳೆಯರೇ ಗಮನಿಸಿ ; ‘ಅಕ್ಕ ಕೆಫೆ’ ಆರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನ.!

ಬಳ್ಳಾರಿ ಮಹಾನಗರ ಪಾಲಿಕೆಯ ಡೇ-ನಲ್ಮ್ ಯೋಜನೆಯಡಿ ರಚಿತವಾದಂತಹ ಅರ್ಹ ಮಹಿಳಾ ಸ್ವಸಹಾಯ ಸಂಘಗಳಿಂದ ಬಳ್ಳಾರಿ ನಗರದಲ್ಲಿ ‘ಅಕ್ಕ ಕೆಫೆ’ ಪ್ರಾರಂಭಿಸಲು ಆಸಕ್ತರಿದ್ದಲ್ಲಿ ಮಹಾನಗರ ಪಾಲಿಕೆಯ ವಲಯ ಕಚೇರಿ-2ರ ಡೇ-ನಲ್ಮ್ ಶಾಖೆಗೆ ಸಂಪರ್ಕಿಸಬಹುದು.

ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಮಾಡಲು ಅವಕಾಶ ಕಲ್ಪಿಸುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ‘ಅಕ್ಕ ಕೆಫೆ’ ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮಹಾನಗರ ಪಾಲಿಕೆಯ ವಲಯ ಕಚೇರಿ-2ರ ಡೇ-ನಲ್ಮ್ ಶಾಖೆಗೆ ಸಂಪರ್ಕಿಸಬಹುದು ಎಂದು ಪಾಲಿಕೆ ಕಚೇರಿ ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular