ಬೆಂಗಳೂರು : 2025-26 ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ (ದಿನಾಂಕ:10.02.2025ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್.ಡಿ ಪ್ರಾರಂಭಿಸಿರಬೇಕು.
ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-I, II(ಎ), III(ಎ) ಹಾಗೂ III(ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ/ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:09.01.2026ರ ಸಂಜೆ 5.30 ಗಂಟೆ. – https://bcwd.karnataka.gov.in ಲಭ್ಯವಿದ್ದು, ಅಭ್ಯರ್ಥಿಗಳು ಎಲ್ಲಾ ಮಾಹಿತಿಯನ್ನು ಓದಿ, ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸುವುದು. (ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 8050770004 (ಕಛೇರಿ ಕಾರ್ಯನಿರ್ವಹಿಸುವ ಸಮಯ ಬೆಳಗ್ಗೆ 10.00 ರಿಂದ ಸಂಜೆ 05.30 ರವರೆಗೆ)


