ಅಲ್ಪಸಂಖ್ಯಾತ ನಿರ್ದೇಶನಾಲಯದ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಆರಂಭ : ಇಲ್ಲಿದೆ ಮಾಹಿತಿ

ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿನ ವಿವಿಧ ವಸತಿ ಶಾಲೆಗಳ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಇಂದಿನಿಂದ ಆರಂಭವಾಗಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳು (ಸಿ.ಬಿ.ಎಸ್.ಇ), ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು 123 ಶಾಲೆಗಳು ಕಾರ್ಯನಿರ್ವಹಿಸುತ್ತಿರುತ್ತವೆ.

ಸದರಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್, ಸಿಖ್ ಮತ್ತು ಪಾರ್ಸಿ ಅರ್ಹ ವಿದ್ಯಾರ್ಥಿಗಳು ಮತ್ತು ಪ.ಜಾತಿ/ಪ.ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

1 ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 16.02.2024

2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :15.03.2024

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಅಲ್ಪಸಂಖ್ಯಾತರ ಸಹಾಯವಾಣಿ: 8277799990, 080-22535902

ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಉಚಿತ ಸೇವೆ ಬಳಸಿಕೊಳ್ಳಲು ತಮ್ಮ ಸಮೀಪದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು, ಡಾ| ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮತ್ತು ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ. Website: https://sevasindhuservices.karnataka.gov.in ಇತರೆ ವಿವರಗಳನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ https://dom.karnataka.gov.ina  ಪಡೆಯಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read