ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು ಮೇ 2 ರಿಂದ ಆರಂಭವಾಗಲಿದೆ. ತೋಟಗಾರಿಕೆ ತರಬೇತಿ ಕೇಂದ್ರ, ಸೋಮನಹಳ್ಳಿ ಕಾವಲ್, ಹಾಸನ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿಗಳನ್ನು ಈ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 1 ರ ಸಂಜೆ 5 ಗಂಟೆ ಯೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಈ ಕಚೇರಿ ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದಾಗಿದೆ ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿ ಪಡೆಯಬಹುದಾಗಿದೆ.

ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್‍ಟಿಸಿ, ಜಾತಿ ಪ್ರಮಾಣ ಪತ್ರ, ಫೋಟೋ, ತಂದೆ/ ತಾಯಿಯವರ ಒಪ್ಪಿಗೆ ಪತ್ರ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ (ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸತಕ್ಕದ್ದು ಎಂದು ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read