ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿಯಿರುವ 15 ಶುಶ್ರೂಷಾಧಿಕಾರಿ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆ/ಸಂಸ್ಥೆಗಳಲ್ಲಿ ನರ್ಸಿಂಗ್ ಶಿಕ್ಷಣ ಪೂರೈಸಿರಬೇಕು.ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು.
ಈ ನೇಮಕಾತಿಯು ನಿಯಮಾನುಸಾರ ಷರತ್ತುಗಳಿಗೆ ಒಳಪಟ್ಟಿರುತ್ತದೆ.ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗವಿಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 30 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ 08182-222382 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಎಸ್ ಸಿ, ಎಸ್ ಟಿ ನಿರುದ್ಯೋಗಿ ಪದವೀಧರರಿಗೆ ಉದ್ಯಮ ಸ್ಥಾಪಿಸಲು ಸಬ್ಸಿಡಿ : ಅರ್ಜಿ ಆಹ್ವಾನ
ಶಿವಮೊಗ್ಗ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲೂಕು ಕಛೇರಿಯು ಈ ಸೌಲಭ್ಯವನ್ನು ಒದಗಿಸುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಘಟಕ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಠ ₹5.00 ಲಕ್ಷಗಳ ಸಹಾಯಧನ ಸಿಗಲಿದೆ.
ಪದವಿ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರು : 31-07-2026 ರೊಳಗೆ ಅರ್ಜಿ ಸಲ್ಲಿಸಬಹುದು.ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ ತಾಲೂಕು ಕಛೇರಿ ಇಲ್ಲಿ ಆಸಕ್ತರು ಸೂಕ್ತ ದಾಖಲೆಗಳೊಂದಿಗೆ ಕಛೇರಿ ವೇಳೆಯಲ್ಲಿ ನೇರವಾಗಿ ಭೇಟಿ ನೀಡಿ ಅರ್ಜಿ ನಮೂನೆ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9480843194 ಅನ್ನು ಸಂಪರ್ಕಿಸುವಂತೆ ಶಿವಮೊಗ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1), ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

