HomeUncategorized'ಮೊರಾರ್ಜಿ ದೇಸಾಯಿ' ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

‘ಮೊರಾರ್ಜಿ ದೇಸಾಯಿ’ ವಸತಿ ಶಾಲೆಗಳಲ್ಲಿ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

2026-27 ನೇ ಸಾಲಿಗೆ ಧಾರವಾಡ ಜಿಲ್ಲೆಯಲ್ಲಿನ 06 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6 ನೇ ತರಗತಿ (ಆಂಗ್ಲ ಮಾಧ್ಯಮ) ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದ ಇತರೇ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

5 ನೇ ತರಗತಿ ಪಾಸಾದ ಹಾಗೂ ಆದಾಯ ರೂ.2.50 ಲಕ್ಷಗಳಿಂತ ಕಡಿಮೆ ಇರುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್,ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ (ಒಬಿಸಿ) ಶೇ.25 ಸೀಟು ಲಭ್ಯವಿದೆ. ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕು, ಅಂಚಟಗೇರಿ ಗ್ರಾಮದಲ್ಲಿರುವ ಡಾ|| ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಅಂಚಟಗೇರಿ ಹುಬ್ಬಳ್ಳಿ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂ.02 ಹಾಗೂ ಶಿಂಗನಹಳ್ಳಿ ಧಾರವಾಡ ಗ್ರಾಮೀಣ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಹೆಣ್ಣುಮಕ್ಕಳ ವಸತಿ ಶಾಲೆ (ಅದರಗುಂಚಿ ಹುಬ್ಬಳ್ಳಿ) ಧಾರವಾಡ, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ ನವಲಗುಂದ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಧಾರವಾಡ ಗ್ರಾಮೀಣ, ವಸತಿ ಶಾಲೆಗಳ ಪ್ರವೇಶಕ್ಕಾಗಿ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ವಸತಿ ಶಾಲೆಗಳಲ್ಲಿ ಉಚಿತ ಊಟ, ವಸತಿ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರಗಳೊಂದಿಗೆ ಇನ್ನಿತರೇ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಪ್ರವೇಶ ಬಯಸುವ ಅಲ್ಪಸಂಖ್ಯಾತರ ಮತ್ತು ಇತರೇ ಪ್ರವರ್ಗಗಳ ಆಸಕ್ತ ವಿದ್ಯಾರ್ಥಿಗಳು ಸಂಬಂಧಿಸಿದ ಸೇವಾ ಸಿಂಧು ಪೋರ್ಟಲ್ ವೈಬ್‍ಸೈಟ್ ಲಿಂಕ್ : https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ತಾಲ್ಲೂಕಾ ಮಾಹಿತಿ ಕೇಂದ್ರಗಳಾದ ಧಾರವಾಡ-9738287549, ಹುಬ್ಬಳ್ಳಿ:8867718261, ನವಲಗುಂದ:8746894524, ಕಲಘಟಗಿ:-8951674107, ಕುಂದಗೋಳ:8904661872 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular