ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಉನ್ನತ ಶಿಕ್ಷಣ ಎಲ್ಲರಿಗೂ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, ವಿಶ್ವವಿದ್ಯಾನಿಲಯವು ಕರ್ನಾಟಕದಾದ್ಯಂತ ಪ್ರಾದೇಶಿಕ ಕೇಂದ್ರಗಳನ್ನು ತೆರೆದು ವಿದ್ಯಾರ್ಥಿಗಳಿಗೆ ರೆಗ್ಯುಲರ್ ವಿಶ್ವವಿದ್ಯಾನಿಲಯಗಳ ಉನ್ನತ ಶಿಕ್ಷಣಕ್ಕೆ ಸರಿಸಮನಾಗಿ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡುತ್ತಿದೆ. 10+2 (ಪದವಿ ಪೂರ್ವ), 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕ.ರಾ.ಮು.ವಿ.,ಯಲ್ಲಿ ಪ್ರವೇಶಾತಿ ಪಡೆಯಬಹುದು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ 2025-26ನೇ ಸಾಲಿನ ಜನವರಿ ಆವೃತ್ತಿಯ ಬಿ.ಎ, ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಲಿಬ್.ಸೈನ್ಸ್., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಕಾಂ., ಎಂ.ಎಸ್ಸಿ., ಎಂ.ಬಿ.ಎ., ಎಂ.ಲಿಬ್.ಸೈನ್ಸ್., ಎಂ.ಎಸ್.ಡಬ್ಲ್ಯೂ., ಎಂ.ಸಿ.ಎ., ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭಗೊಂಡಿದ್ದು. ವಿದ್ಯಾರ್ಥಿಗಳು ಪ್ರಥಮ ವರ್ಷಕ್ಕೆ ಪ್ರವೇಶಾತಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಂತರ್ಜಾಲ www.ksoumysuru.ac.in ಗೆ ಭೇಟಿ ನೀಡಬಹುದು. ಅಥವಾ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಪ್ರಾದೇಶಿಕ ಕೇಂದ್ರ, ಅಮರಗೋಳ 2ನೇ ಹಂತ, ಜಡ್ಜ್ ಕಾಲೋನಿ ಹತ್ತಿರ, ನವನಗರ, ಹುಬ್ಬಳ್ಳಿ ಅವರ ದೂರವಾಣಿ ಸಂಖ್ಯೆ: 0836-2441199, 7019314679 ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕ ಡಾ.ಲೋಕೇಶ.ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

