ಧಾರವಾಡ ನಗರದ ಸಪ್ತಾಪುರ ರಸ್ತೆಯಲ್ಲಿರುವ ಮಿಲಿಟರಿ ಬಾಲಕಿಯರ ವಸತಿ ನಿಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಧಾರವಾಡ, ಗದಗ, ಹಾವೇರಿ ಮತ್ತು ಬಳ್ಳಾರಿ ಜಿಲ್ಲೆಗಳ ಗ್ರಾಮೀಣ ಪ್ರದೇಶದ ಹಾಗೂ ರಾಜ್ಯದ ಇತರ ಜಿಲ್ಲೆಗಳ ಯುದ್ಧದಲ್ಲಿ ಮಡಿದ ಯೋಧರ ಮತ್ತು ಮಾಜಿ ಸೈನಿಕರ ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ.
5ನೇ ತರಗತಿಯಿಂದ ಪಿಯುಸಿ – 2ನೇ ವರ್ಷದವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ವಸತಿ ನಿಲಯದಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿನಿಯರು ಕಡ್ಡಾಯವಾಗಿ ಧಾರವಾಡ ನಗರದ ಶಾಲಾ-ಕಾಲೇಜುಗಳಲ್ಲಿಯೇ ಪ್ರವೇಶ ಪಡೆದಿರಬೇಕು.ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಅರ್ಜಿ ಸಲ್ಲಿಸಲು ಏ.30 ಕೊನೆಯ ದಿನವಾಗಿದೆ.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉದಯ ಹಾಸ್ಟೆಲ್ ಸರ್ಕಲ್, ಸೈನಿಕ ವಿಶ್ರಾಂತಿ ಗೃಹ ಆವರಣ, ಧಾರವಾಡ (ದೂ.0836-2440176) ಇಲ್ಲಿಗೆ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ: ಏ.12 ರಂದು ಪ್ರವೇಶ ಪರೀಕ್ಷೆ
ಬಳ್ಳಾರಿ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ (ಆಂಗ್ಲ ಮಾಧ್ಯಮ) ಶಾಲೆಗಳ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ (ಸಿ.ಬಿ.ಎಸ್.ಇ) ಶಾಲೆಯ ದಾಖಲಾತಿಗಾಗಿ 2026-27ನೇ ಶೈಕ್ಷಣಿಕ ವರ್ಷಕ್ಕೆ 6ನೇ ತರಗತಿಗೆ ಉಚಿತ ಪ್ರವೇಶಕ್ಕಾಗಿ ಏ.12 ರಂದು ಪ್ರವೇಶ ಪರೀಕ್ಷೆ ನಡೆಸಲು ನಿಗದಿಪಡಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರದ ಮೌಲಾನ ಅಜಾದ ಭವನದ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಅಥವಾ ದೂ.08392-200125/224, ಸಹಾಯವಾಣಿ ಕೇಂದ್ರ (24*7) – 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

