ವಿಕಲಚೇತನರ ಗಮನಕ್ಕೆ : ʻದ್ವಿಚಕ್ರ ವಾಹನʼ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯ ಯೋಜನೆಗಳಾದ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆöÊಲ್ ಕಿಟ್ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಹ ವಿಕಲಚೇತನರು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಸೇವಾಸಿಂಧು  (https://sevasindhu.karnataka.gov.in/Sevasindhu/Kannada)     ಪೋರ್ಟ್ಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಿದ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ, ಕೊಠಡಿ ಸಂಖ್ಯೆ 31,32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ, ಹೊಸಪೇಟೆ ರಸ್ತೆ, ಕೊಪ್ಪಳ ಈ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಎಂ.ಆರ್.ಡಬ್ಲ್ಯೂ ಗಳಾದ ಕೊಪ್ಪಳ-ಜಯಶ್ರೀ: 9980126391, ಯಲಬುರ್ಗಾ-ಬಸನಗೌಡ: 9964803047, ಕುಷ್ಟಗಿ-ಚಂದ್ರಶೇಖರ: 9916308585, ಗಂಗಾವತಿ-ಮಂಜುಳಾ: 7975398202 ಇವರನ್ನು ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read