HomeLatest News'ಮೈಸೂರು ದಸರಾ' ಪುಸ್ತಕ ಮಾರಾಟ ಮೇಳದಲ್ಲಿ ಪುಸ್ತಕ ಮಳಿಗೆಗಳಿಗೆ ಅರ್ಜಿ ಆಹ್ವಾನ

‘ಮೈಸೂರು ದಸರಾ’ ಪುಸ್ತಕ ಮಾರಾಟ ಮೇಳದಲ್ಲಿ ಪುಸ್ತಕ ಮಳಿಗೆಗಳಿಗೆ ಅರ್ಜಿ ಆಹ್ವಾನ

ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2025 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ 22, 2025 ರಿಂದ ಅಕ್ಟೋಬರ 01, 2025 ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2025 ವನ್ನು ಮೈಸೂರು ಹಳೆ ಡಿ.ಸಿ. ಕಚೇರಿ ಎದುರುಗಡೆ ಸ್ಕೌಟ್ಸ ಮತ್ತು ಗೈಡ್ಸ್ ಮೈದಾನದಲ್ಲಿ ಏರ್ಪಡಿಸಲಾಗುವುದು.

ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1000 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು.

ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು, ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ hಣಣಠಿs://ಞಠಿಠಿ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಸೆಪ್ಟೆಂಬರ 18, 2025 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ [email protected] ರ ಮೂಲಕ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ:080-22484516, 22107704 ಗೆ ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular