HomeLatest Newsನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಜನವರಿ 12, 2025 ರಿಂದ ಜನೆವರಿ 18, 2026 ರವರೆಗೆ ಬೆಳಿಗ್ಗೆ 6:30 ಗಂಟೆಯಿಂದ 9 ಗಂಟೆಯವರೆಗೆ ಧಾರವಾಡ ಪೊಲೀಸ್ ಕವಾಯತು ಮೈದಾನ ಡಿ.ಎ.ಆರ್ ಘಟಕದಲ್ಲಿ ನಾಗರಿಕ ಬಂದೂಕು ತರಬೇತಿಯನ್ನು ಆಯೋಜಿಸಲಾಗಿದೆ.

ನಾಗರಿಕ ಬಂದೂಕು ತರಬೇತಿಯನ್ನು ಪಡೆಯಲು ಇಚ್ಛಿಸುವ, ಧಾರವಾಡ ಜಿಲ್ಲಾ ವ್ಯಾಪ್ತಿಯ ನಾಗರಿಕರು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳನ್ನು ಅಥವಾ ಜಿಲ್ಲಾ ಆಯುಧಗಾರರು. ಡಿ.ಎ.ಆರ್. ಧಾರವಾಡ (ವೈ.ಎಂ. ಕಡೇಮನಿ, ಮೊ.ಸಂ: 872252206) ಅವರನ್ನು ಸಂಪರ್ಕಿಸಬಹುದು.

ನಿಗಧಿತ ನಮೂನೆಯಲ್ಲಿ ವಿವರಗಳನ್ನು ತುಂಬಿ, ಇತ್ತೀಚಿನ 03 ಪಾಸ್ ಪೋರ್ಟ್ ಸೈಜ್ ಫೋಟೋ, ಆಧಾರ ಕಾರ್ಡ ಪ್ರತಿಯೊಂದಿಗೆ ಜನವರಿ 09, 2026 ರೊಳಗೆ ಪೊಲೀಸ್ ಠಾಣೆಗೆ ಸಲ್ಲಿಸುವುದು ಹಾಗೂ ನಾಗರಿಕ ಬಂದೂಕು ತರಬೇತಿಗೆ ತಗಲುವ ವೆಚ್ಚವನ್ನು ಅರ್ಜಿದಾರರಿಂದ ಡಿ.ಎ.ಆರ್. ಘಟಕದಲ್ಲಿ ನಗದು ರೂಪದಲ್ಲಿ ಪಡೆದುಕೊಂಡು ಒಟ್ಟು 07 ದಿನಗಳ ತರಬೇತಿಯನ್ನು ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ಹಾಗೂ ನಾಗರಿಕ ಬಂದೂಕು ತರಬೇತಿಯ ಷರತ್ತುಗಳಿಗಾಗಿ ತಮ್ಮ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳನ್ನು ಅಥವಾ ಡಿ.ಎ.ಆರ್. ಕೇಂದ್ರ ಕಛೇರಿಯನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ನಾಗರಿಕ ಬಂದೂಕು ತರಬೇತಿಯ ಷರತ್ತುಗಳಿಗಾಗಿ ತಮ್ಮ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳನ್ನು ಅಥವಾ ಡಿ.ಎ.ಆರ್. ಕೇಂದ್ರ ಕಛೇರಿಯನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular