ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27ನೇ ಸಾಲಿಗೆ 11ನೇ ತರಗತಿಗೆ ವಾಣಿಜ್ಯ ವಿಭಾಗಕ್ಕೆ ಖಾಲಿ ಇರುವ ಸೀಟುಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
2025-26 ನೇ ಸಾಲಿನಲ್ಲಿ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. ಹತ್ತನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇಕಡವಾರು 50 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಯು 01.06.2009 ರಿಂದ 31.7.2011 ರ ದಿನಾಂಕದೊಳಗೆ ಜನಿಸಿರಬೇಕು.
ಅರ್ಹ ಆಸಕ್ತ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ವಿದ್ಯಾಲಯದ ಕಾರ್ಯಾಲಯಕ್ಕೆ ಜೂ. 30 ರ ಒಳಗಾಗಿ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಭಾರತ ಸರ್ಕಾರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್ಸೈಟ್ www.sw.kar.nic.in & http://ssp.postmatric.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿವಮೊಗ್ಗ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರ (ಗ್ರೇಡ್-1) ಕಚೇರಿ, ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ ಹೆಚ್ ರಸ್ತೆ, ದೂ.ಸಂ: 08182-240512 ನ್ನು ಸಂಪರ್ಕಿಸುವುದು

